ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,810 ಹೊಸ ಕೊರೋನಾ ಪ್ರಕರಣ ಪತ್ತೆ… ನವದೆಹಲಿ,ನವೆಂಬರ್,30,2020(..):ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,810 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 94,31,692ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಒಂದೇ ದಿನದಲ್ಲಿ ಕೊರೋನಾ ಸೋಂಕಿಗೆ 443 ಜನರು ಮೃತಪಟ್ಟಿದ್ದಾರೆ. ಇದುವರೆಗೂ ಒಟ್ಟು ಮೃತಪಟ್ಟವರ ಸಂಖ್ಯೆ 1,37,139. 24 ಗಂಟೆಯಲ್ಲಿ 45,333 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 88,47,600 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ 4,46,952 ಸಕ್ರಿಯ ಕೊರೋನಾ ಪ್ರಕರಣಗಳಿವೆ. ಒಂದೇ ದಿನ 8,76,173 ಮಾದರಿಗಳ ಪರೀಕ್ಷೆಗಳನ್ನು ನಡೆಸಲಾಗಿದೆ. ಇದುವರೆಗೂ 14,03,79,976 ಮಾದರಿಗಳ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. : 41,810 - - 24 -