ಮೈಸೂರು ಡಿಸಿ – ಶಾಸಕರ ನಡುವಿನ ಗೊಂದಲ ಶೀಘ್ರ ಬಗೆಹರಿಸುವೆ- ಸಚಿವ ಎಸ್ ಟಿ ಸೋಮಶೇಖರ್… ಚನ್ನರಾಯಪಟ್ಟಣ,ನವೆಂಬರ್,28,2020(..):ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಶಾಸಕರಾದ ಮಂಜುನಾಥ್ ಅವರ ನಡುವಿನ ಭಿನ್ನಾಭಿಪ್ರಾಯಗಳನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು. ಇಲ್ಲಿ ಸಂವಹನ ಕೊರತೆಯಾಗಿದ್ದು, ಭಾನುವಾರ ಹಾಗೂ ಸೋಮವಾರ ಮೈಸೂರಿನಲ್ಲೇ ವಾಸ್ತವ್ಯ ಹೂಡುತ್ತಿದ್ದು, ಈ ಬಗ್ಗೆ ಅವರ ಜೊತೆ ಚರ್ಚಿಸಿ ಬಗೆಹರಿಸಲಾಗುವುದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ಹೇಳಿದರು. ಚನ್ನರಾಯಪಟ್ಟಣದಲ್ಲಿ ಶನಿವಾರ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಮೈಸೂರಿನಲ್ಲಿ ಈಚೆಗೆ ನಡೆದ ಕೆಡಿಪಿ ಸಭೆಯಲ್ಲಿ ನಾನೂ ಸಹ 4 ಗಂಟೆಗಳ ಕಾಲ ಭಾಗವಹಿಸಿದ್ದು, ಈ ಸಂದರ್ಭದಲ್ಲಿ ಶಾಸಕರಾದ ಮಂಜುನಾಥ್ ಅವರು ತಮ್ಮ ಪತ್ರಗಳಿಗೆ ಜಿಲ್ಲಾಧಿಕಾರಿಗಳು ಯಾವುದೇ ಉತ್ತರ ಕೊಡುತ್ತಿಲ್ಲ ಎಂದು ಆರೋಪಿಸಿದ್ದರು. ಆದರೆ ತಮಗೆ ಯಾವುದೇ ಪತ್ರ ಬಂದಿಲ್ಲ ಎಂದು ಜಿಲ್ಲಾಧಿಕಾರಿಗಳಾದ ರೋಹಿಣಿ ಸಿಂಧೂರಿ ಅವರು ಪ್ರತಿಕ್ರಿಯೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಕುಳಿತು ಚರ್ಚೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲಾಗುವುದು. ಇದರಲ್ಲಿ ಯಾವುದೇ ಗೊಂದಲ ಬೇಡ. ಶಾಸಕರಾದ ಸಾ.ರಾ. ಮಹೇಶ್ ಅವರ ಹೇಳಿಕೆ ಬಗ್ಗೆಯೂ ಗಮನಹರಿಸಲಾಗುವುದು. ಈ ಮೂಲಕ ಜಿಲ್ಲಾಡಳಿತ ಸುಗಮವಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತೇನೆ ಸ್ಪಷ್ಟನೆ ನೀಡಿದರು. ಸಂತೋಷ್ ಒಳ್ಳೆಯ ಹುಡುಗ, ರಾಜಕೀಯವಾಗಿ ಇನ್ನೂ ಮುಂದೆ ಬರಬೇಕು…. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣದ ಬಗ್ಗೆ ನನಗೂ ಈಗ ಮಾಹಿತಿ ಬಂದಿದೆ. ಆದರೆ ಅವರು ಯಾವ ಕಾರಣಕ್ಕಾಗಿ ಈ ರೀತಿ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ ಇನ್ನೂ ತಿಳಿದು ಬಂದಿಲ್ಲ. ಈಗ ಮುಖ್ಯಮಂತ್ರಿಗಳು ಸ್ವತಃ ಅವರನ್ನು ಭೇಟಿ ಮಾಡಿದ್ದ ವಿಷಯ ಮಾಧ್ಯಮಗಳ ಮೂಲಕ ನನಗೆ ತಿಳಿದಿದೆ. ಸದ್ಯದಲ್ಲೇ ಸತ್ಯ ತಿಳಿಯಲಿದೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು. ಕಳೆದ ವಾರ ಮೈಸೂರಿನಲ್ಲಿ ಮುಖ್ಯಮಂತ್ರಿಗಳ ಸಹೋದರಿಯ ಪುತ್ರಿಯ ವಿವಾಹ ಸಮಾರಂಭವಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಜೊತೆ ಸಂತೋಷ್ ಅವರು ಸಹ ಪಾಲ್ಗೊಂಡಿದ್ದರು. ಅವರು ಸಿಎಂ ಜೊತೆ ಲವಲವಿಕೆಯಿಂದಲೇ ಮಾತನಾಡಿದ್ದರು. ಆ ಸಂದರ್ಭದಲ್ಲಿ ನಾನು ಸಹ ಭಾಗವಹಿಸಿದ್ದರಿಂದ ಹತ್ತಿರದಿಂದ ಕಂಡಿದ್ದೇನೆ. ಸಂತೋಷ್ ಅವರ ನಡೆಯಲ್ಲಿ ಹಾಗೂ ವರ್ತನೆಯಲ್ಲಿ ಯಾವುದೇ ರೀತಿಯ ಬೇಸರ ಕಾಣುತ್ತಿರಲಿಲ್ಲ ಎಂದು ಹೇಳಿದರು. ಡಿ.ಕೆ.ಶಿವಕುಮಾರ್ ಹೇಳಿಕೆ ಸತ್ಯಕ್ಕೆ ದೂರ…. ಇನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಬೆಳಗಾವಿಯಲ್ಲಿ ಸೀಡಿಯೊಂದರ ವಿಚಾರಕ್ಕೆ ಸಂತೋಷ್ ಅವರು ಆತ್ಮಹತ್ಯೆ ಯತ್ನ ಮಾಡಿಕೊಂಡಿದ್ದಾರೆಂಬ ಹೇಳಿಕೆ ಸತ್ಯಕ್ಕೆ ದೂರ. ಹಾಗೆ ಸೀಡಿಗಳು ಇದ್ದರೆ ಅವರು ಹೊರಗೆ ತರಲಿ, ಅದುಬಿಟ್ಟು ಈ ತರಹ ಹೇಳಿಕೆ ನೀಡಬಾರದು ಎಂದು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಸಂತೋಷ್ ಒಬ್ಬ ಒಳ್ಳೆಯ ಹುಡುಗ. ಅವರು ರಾಜಕೀಯವಾಗಿ ಇನ್ನೂ ಮುಂದೆ ಬರಬೇಕಿದೆ. ಅವರಿಗೆ ಮಾನಸಿಕವಾಗಿ ತೊಂದರೆ ಕಂಡಿರಬಹುದು. ಈ ಬಗ್ಗೆ ಶೀಘ್ರವೇ ಎಲ್ಲರಿಗೂ ತಿಳಿಯುತ್ತದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು. … : .. , . 28, 2020 (..): “ .. . . . ,” .. , -. , 4 , . . . . . , . ’ . .. ’ ’ . “ , ,” .: - / /.. / . . : – - – - - .