ಲಿಂಗಾಯತ ಸಮುದಾಯ ಒಬಿಸಿಗೆ ಸೇರ್ಪಡೆ ವಿಚಾರ: ಸದ್ಯಕ್ಕಿಲ್ಲ ಯಾವುದೇ ತೀರ್ಮಾನ…. ಬೆಂಗಳೂರು,ನವೆಂಬರ್,27,2020(..):ವೀರಶೈವ-ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸುವಂತೆ ಒತ್ತಾಯ ಕೇಳಿ ಬಂದಿದ್ದು ಆದರೆ ಈ ವಿಚಾರದ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ ಎಂಧು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ಸೇರಿದಂತೆ ಸಮುದಾಯದ ಮುಖಂಡರು ಲಿಂಗಾಯತ ಸಮುದಾಯವನ್ನ ಒಬಿಸಿಗೆ ಸೇರಿಸುವಂತೆ ಸಿಎಂಗೆ ಮನವಿ ಮಾಡಿದ್ದರು. ಇಂದಿನ ಸಂಪುಟ ಸಭೆಯಲ್ಲಿ ವೀರಶೈವ-ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರ್ಪಡೆ ಕುರಿತು ಚರ್ಚೆ ನಡೆಯುತ್ತದೆ ಎನ್ನಲಾಗಿತ್ತು. ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿದ್ದು ಆದರೆ ಲಿಂಗಾಯತ ಸಮುದಾಯವನ್ನ ಒಬಿಸಿಗೆ ಸೇರಿಸುವ ವಿಷಯಕ್ಕೆ ಅಡ್ವಕೇಟ್ ಜನರಲ್ ಆಕ್ಷೇಪ ವ್ಯಕ್ತಪಡಿಸಿದರು. ಈ ಬಗ್ಗೆ ಇನ್ನಷ್ಟು ಅಧ್ಯಯನ ನಡೆಯಬೇಕಿದೆ. ಕಾನೂನು ವ್ಯಾಪ್ತಿ ನೋಡಬೇಕಿದೆ. ಸದ್ಯಕ್ಕೆ ಈ ವಿಚಾರ ಮುಂದಕ್ಕೆ ಹಾಕಿ ಎಂದು ಅಡ್ವೋಕೇಟ್ ಜನರಲ್ ತಿಳಿಸಿದರು. ಎಜಿ ಆಕ್ಷೇಪದ ಬಗ್ಗೆ ಸಚಿವ ಮಾಧುಸ್ವಾಮಿ ಸಚಿವ ಸಂಪುಟ ಸಭೆಯಲ್ಲಿ ಸಿಎಂಗೆ ಮಾಹಿತಿ ನೀಡಿದರು. ಈ ಹಿನ್ನೆಲೆ ಲಿಂಗಾಯತ ಸಮುದಾಯವನ್ನ ಒಬಿಸಿಗೆ ಸೇರಿಸುವ ವಿಚಾರವನ್ನ ಮುಂದಿನ ಸಚಿವ ಸಂಪುಟ ಸಭೆಗೆ ಸಿಎಂ ಬಿಎಸ್ ಯಡಿಯೂರಪ್ಪ ಮುಂದೂಡಿದರು. ಈ ಕುರಿತು ಮುಂದೆ ಚರ್ಚಿಸೋಣ ಎಂದರು. ಸಂಪುಟ ಸಭೆಗೂ ಮುನ್ನ ಮಾತನಾಡಿದ್ದ ಸಿಎಂ ಯಡಿಯೂರಪ್ಪ, ವೀರಶೈವ-ಲಿಂಗಾಯತ ಮೀಸಲಾತಿ ವಿಚಾರದ ಬಗ್ಗೆ ಚರ್ಚೆ ನಡೆಸುತ್ತೇವೆ. ಆದರೆ ಈ ಬಗ್ಗೆ ಇಂದಿನ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಲ್ಲ. ಇನ್ನೊಮ್ಮೆ ದೆಹಲಿಗೆ ಹೋಗಿ ಈ ಬಗ್ಗೆ ಸಮಾಲೋಚನೆ ನಡೆಸಿ ನಂತರ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದರು. …. , . 22, 2020 (..): .. - . ’ . , , . .: -// : - - –