ಬೈಕ್ ಮತ್ತು ಆಟೋ ನಡುವೆ ಡಿಕ್ಕಿ: ಬೈಕ್ ಸವಾರ ಸಾವು… ಮೈಸೂರು,ನವೆಂಬರ್,27,2020(..):ಬೈಕ್ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮೈಸುರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ಆದಿ ಚುಂಚನಗಿರಿ ಕಲ್ಯಾಣ‌ ಮಂಟಪದ ಬಳಿ ಈ ಘಟನೆ ನಡೆದಿದೆ. ಮಹದೇವ ಅಪಘಾತದಲ್ಲಿ ಮೃತ ದುರ್ದೈವಿ. ಅಪಘಾತದಲ್ಲಿ ಮತ್ತೊಬ್ಬ ಸವಾರ ದೇವೇಂದ್ರ ಎಂಬಾತನಿಗೆ ಗಂಭೀರ ಗಾಯವಾಗಿದ್ದು ಗಾಯಾಳು ದೇವೇಂದ್ರರನ್ನ ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮಹದೇವ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಚಿಲ್ಕುಂದ ಗ್ರಾಮದ ನಿವಾಸಿಯಾಗಿದ್ದಾರೆ. ಈ ಕುರಿತು ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : –- –- – -