ಮೈಸೂರು ರೇಸ್ ಕ್ಲಬ್ ಗೆ ಭೂಮಿ ಗುತ್ತಿಗೆ ವಿಚಾರ: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್… ಮೈಸೂರು,ನವೆಂಬರ್,27,2020(..):ಮೈಸೂರು ರೇಸ್ ಕ್ಲಬ್ ಗೆ ಭೂಮಿ ಗುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್ ನೀಡಿದೆ. ಕುರುಬರಹಳ್ಳಿಯಲ್ಲಿ ಸರ್ಕಾರದ 139 ಎಕರೆ ಭೂಮಿಯನ್ನು 30 ವರ್ಷಗಳವರೆಗೆ ಮೈಸೂರಿನ ರೇಸ್ ಕ್ಲಬ್ ಲಿಮಿಟೆಡ್​​ಗೆ ಗುತ್ತಿಗೆ ನೀಡಿರುವ ಕ್ರಮ ಪ್ರಶ್ನಿಸಿ ಹೈಕೋರ್ಟ್ ನಿಂದ ಸರ್ಕಾರಕ್ಕೆ ನೊಟೀಸ್ ಜಾರಿಯಾಗಿದೆ. ವಕೀಲ‌ ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮೇರೆಗೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ, ಯಾವ ಆಧಾರದಲ್ಲಿ ಭೂಮಿಯನ್ನು 30 ವರ್ಷ ಗುತ್ತಿಗೆ ನೀಡಲಾಗಿದೆ. ಗುತ್ತಿಗೆಗೆ ಪ್ರತಿಫಲವಾಗಿ ಕ್ಲಬ್ ವಾರ್ಷಿಕವಾಗಿ ಗಳಿಸುವ ಆದಾಯದ ಶೇ. 2ರಷ್ಟನ್ನು ಬಾಡಿಗೆಯಾಗಿ ನಿಗದಿಪಡಿಸಲಾಗಿದೆ. ಅದರಂತೆ ಕ್ಲಬ್ ಒಂದು ವೇಳೆ ಆದಾಯ ಗಳಿಸದಿದ್ದರೆ ಬಾಡಿಗೆ ನೀಡುವಂತಿಲ್ಲವೇ ಎಂದು ಪ್ರಶ್ನಿಸಿರುವ ಹೈಕೋರ್ಟ್, ಈ ಎಲ್ಲಾ ವಿಚಾರವಾಗಿ ಸ್ವಷ್ಟನೆ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಜಮೀನಿನ ಉಪ ಗುತ್ತಿಗೆ ಪಡೆದಿರುವ ಜಯ ಚಾಮರಾಜೇಂದ್ರ ಗಾಲ್ಫ್ ಕ್ಲಬ್ ​ಅನ್ನು ಪ್ರತಿವಾದಿಯಾಗಿ ಸೇರಿಸುವಂತೆ ಅರ್ಜಿದಾರರಿಗೆ ಸೂಚಿಸಿ, ವಿಚಾರಣೆ ಹೈಕೋರ್ಟ್ ಮುಂದೂಡಿದೆ. … : ., . 27, 2020 (..): ’ . ’ 139 30 . . . 2 . ’ ’ ? , - .: / / . / : - – - - -