ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಸಾವು…. ಮೈಸೂರು,ನವೆಂಬರ್,26,2020(..):ಬೈಕ್ ಗೆ ಹಿಂದಿನಿಂದ ಖಾಸಗಿ ಬಸ್‌ ಡಿಕ್ಕಿಯಾಗಿ, ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಸರ್ಕಾರಿ ಅತಿಥಿಗೃಹ ಮುಂಭಾಗದ ಸಿಗ್ನಲ್ ಜಂಕ್ಷನ್‌ ನಲ್ಲಿ ಈ ಘಟನೆ ನಡೆದಿದೆ. ಮೈಸೂರಿನ ಹಳೆ ಕೆಸರೆ ನಿವಾಸಿ ಆನಂದ್(28) ಮೃತಪಟ್ಟ ಬೈಕ್ ಸವಾರ. ಆನಂದ್ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಬೈಕ್‌ ನಲ್ಲಿ ಕೆಎಸ್‌ ಆರ್‌ಟಿಸಿ ಗ್ರಾಮಾಂತರ ಬಸ್ ನಿಲ್ದಾಣ ಕಡೆಯಿಂದ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಖಾಸಗಿ ಬಸ್ ಬೈಕ್‌ ಗೆ ಡಿಕ್ಕಿಯಾಗಿದ್ದು, ಕೆಳಗೆ ಬಿದ್ದ ಆನಂದ್ ಅವರ ತಲೆ ಮೇಲೆ ಬಸ್‌ ನ ಹಿಂಬದಿ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ದೇವರಾಜ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - – - - – .