ತಲಕಾಡು ಪಂಚಲಿಂಗದರ್ಶನ ಸಿದ್ಧತಾ ಪೂರ್ವಭಾವಿ ಸಭೆ: ಅಧಿಕಾರಿಗಳ ಜತೆ ಸಿಎಂ ಬಿಎಸ್ ಯಡಿಯೂರಪ್ಪ ಚರ್ಚೆ…. ಮೈಸೂರು,ನವೆಂಬರ್,25,2020(..):ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ತಲಕಾಡು ಪಂಚಲಿಂಗದರ್ಶನಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ಜರುಗಿತು. ತಲಕಾಡಿನ ಪರಿವೀಕ್ಷಣಾ ಮಂದಿರದಲ್ಲಿ ಸಿಎಂ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಪಂಚಲಿಂಗದರ್ಶನ ಸಿದ್ಧತೆ ಹಾಗೂ ಆಚರಣೆಯ ರೂಪುರೇಷೆಗಳ ಕುರಿತು ಸಚಿವರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸ್ಥಳೀಯ ಶಾಸಕರ ಜೊತೆ ಸಿಎಂ ಬಿಎಸ್ ಯಡಿಯೂರಪ್ಪ ಚರ್ಚಿಸಿದರು. ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಮೀನುಗಾರಿಕೆ ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಸಭೆ ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ಹೆಲಿಕಾಪ್ಟರ್ ಮೂಲಕ ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದು, ನಾಳೆ ಬೆಟ್ಟದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. : – - - –