ವಿದ್ಯುತ್ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪ: ಸಿಎಂ ಬಿಎಸ್ ವೈಗೆ ಆಮ್ ಆದ್ಮಿ ಪಕ್ಷ ರಾಜ್ಯ ಸಂಚಾಲಕರಿಂದ ಬಹಿರಂಗ ಸವಾಲು… ಬೆಂಗಳೂರು,ನವೆಂಬರ್,24,2020(..):ವಿದ್ಯುತ್ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆಮ್ ಆದ್ಮಿ ಪಕ್ಷ ಮಾಡಿದ್ದ ಆರೋಪವನ್ನು ತಳ್ಳಿ ಹಾಕಿದ ಹಿನ್ನೆಲೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಮ್ ಆದ್ಮಿ ಪಕ್ಷ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಬಹಿರಂಗ ಸವಾಲು ಹಾಕಿದ್ದಾರೆ. ಇಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಅವರು, ವಿದ್ಯುತ್ ಖರೀದಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ನಡೆಸಿರುವ ಭಾರಿ ಹಗರಣವನ್ನು ಬಹಿರಂಗಪಡಿಸಿದ್ದರು. ವಿದ್ಯುತ್ ಖರೀದಿಯಲ್ಲಿನ ಭ್ರಷ್ಟಾಚಾರ, ಅಧಿಕಾರದ ದುರ್ಬಳಕೆಯಿಂದ ಆಗಿರುವ ಈ ನಷ್ಟವನ್ನು ಕರ್ನಾಟಕದ ಜನರ ಮೂಲಕ ಹೇಗೆ ವಸೂಲಿ ಮಾಡಲಾಗುತ್ತಿದೆ ಎಂಬುದಕ್ಕೆ ಸೂಕ್ತ ದಾಖಲೆಗಳನ್ನೂ ಸಹ ಒದಗಿಸಲಾಗಿತ್ತು. ಕರ್ನಾಟಕದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ಕಚೇರಿ ಈ ಆರೋಪಗಳಿಗೆ ಪ್ರತಿಕ್ರಿಯಿಸಿದ್ದು “ಆಮ್ ಆದ್ಮಿ ಪಕ್ಷ ನೀಡಿರುವ ಹೇಳಿಕೆಗಳು ಸುಳ್ಳು ದಾಖಲೆಗಳನ್ನು ಆಧರಿಸಿವೆ ಮತ್ತು ದಾರಿತಪ್ಪಿಸುವ ಉದ್ದೇಶವನ್ನು ಹೊಂದಿವೆ” ಎಂದು ಹೇಳಿದೆ. ಮೇಲಿನ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪೃಥ್ವಿ ರೆಡ್ಡಿ ಅವರು ಮುಖ್ಯಮಂತ್ರಿಗಳು ಹಾಗೂ ಇಂಧನ ಖಾತೆಯನ್ನು ಹೊಂದಿರುವ ಬಿ.ಎಸ್ ಯಡಿಯೂರಪ್ಪ ಅವರಿಗೆ 3 ಪ್ರಶ್ನೆಗಳನ್ನು ಕೇಳಿದ್ದಾರೆ. ನೀವು 2 ವರ್ಷಗಳಲ್ಲಿ 42 +% ಹೆಚ್ಚು ಹಣ ನೀಡಿದ್ದೀರಿ !!! ಇದು ನಿಜವಲ್ಲವೇ ಕರ್ನಾಟಕದಲ್ಲಿ ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ಮಾಡಿದ ತಪ್ಪು ಮತ್ತು ಅನ್ಯಾಯದಿಂದ ಬಳಲುತ್ತಿರುವವರು ನಾವು ಅಂದರೆ ಕರ್ನಾಟಕದ 6 ಕೋಟಿ ಜನರು. ಈ ಜನರೆಲ್ಲರ ಪರವಾಗಿ ಈ ಪ್ರಶ್ನೆಗಳಿಗೆ ಉತ್ತರ ಕೇಳುತ್ತಿದ್ದೇವೆ. : – – - - - –