ಕಮಿಷನ್ ಆಸೆಗೆ ಹೆಚ್ಚುವರಿ ವಿದ್ಯುತ್ ಖರೀದಿ –ರಾಜ್ಯ ಸರ್ಕಾರದ ವಿರುದ್ದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಗಂಭೀರ ಆರೋಪ .. ಮೈಸೂರು, ನವೆಂಬರ್,24,2020(..):ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚಿನ ವಿದ್ಯುತ್ ಲಭ್ಯವಿದೆ. ಆದರೂ ಕೇಂದ್ರದಿಂದ ಹಾಗೂ ಇತರೆ ರಾಜ್ಯಗಳಿಂದ ಹೆಚ್ಚುವರಿ ವಿದ್ಯುತ್ ಖರೀದಿ ಮಾಡಲಾಗುತ್ತಿದೆ. ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 15 ಸಾವಿರ ಕೋಟಿ ನಷ್ಟವಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು. ನಗರದ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ಹೆಚ್ಚುವರಿ ವಿದ್ಯುತ್ ಖರೀದಿ ನಿರ್ಧಾರ ವಿರುದ್ಧ ಕಿಡಿಕಾರಿದ ಎಂ. ಲಕ್ಷ್ಮಣ್ , ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚಿನ ವಿದ್ಯುತ್ ಲಭ್ಯವಿದೆ. ಹೆಚ್ಚುವರಿ ವಿದ್ಯುತ್ ಲಭ್ಯವಿದ್ದರೂ ಕೇಂದ್ರದಿಂದ ಹಾಗೂ ಇತರೆ ರಾಜ್ಯಗಳಿಂದ ಹೆಚ್ಚುವರಿ ವಿದ್ಯುತ್ ಖರೀದಿ ಮಾಡಲಾಗುತ್ತಿದೆ. ಕಮಿಷನ್ ಆಸೆಗೆ ಈ ರೀತಿ ವಿದ್ಯುತ್ ಖರೀದಿ ಮಾಡಲಾಗುತ್ತಿದೆ ಎಂದು ಹರಿಹಾಯ್ದರು. ಕಳೆದ 15 ತಿಂಗಳಿನಿಂದಲೂ ಸರ್ಕಾರ ಈ ರೀತಿ ವಿದ್ಯುತ್ ಖರೀದಿ ಮಾಡುತ್ತಿದೆ. ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 15 ಸಾವಿರ ಕೋಟಿ ನಷ್ಟವಾಗಿದೆ. ಹೀಗಾಗಿ ಕೂಡಲೇ ವಿದ್ಯುತ್ ಖರೀದಿಯನ್ನು ನಿಲ್ಲಿಸಿ. ನಮ್ಮಲ್ಲೇ ಲಭ್ಯವಿರುವ ವಿದ್ಯುತ್ ಅನ್ನು ಬಳಸಿಕೊಳ್ಳಿ. ಅಗತ್ಯಕ್ಕಿಂತ ಹೆಚ್ಚಿನ ಹಣವನ್ನು ತೆತ್ತು ವಿದ್ಯುತ್ ಖರೀದಿಸುವ ಅಗತ್ಯವಾದರೂ ಏನಿತ್ತು..? ಕಮಿಷನ್ ಗಾಗಿ ರಾಜ್ಯವನ್ನೇ ಮಾರಿಕೊಳ್ಳುತ್ತಿದ್ದೀರಾ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಗುಡುಗಿದರು. … . . , . 24, 2020 (..): . , . 15,000 . . “ . ,” . 15 , .15,000 .: .15,000 - --. - - : - - –- - . -