ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 37,975 ಮಂದಿಗೆ ಕೊರೋನಾ ಸೋಂಕು… ನವದೆಹಲಿ,ನವೆಂಬರ್,24,2020(..):ದೇಶದಲ್ಲಿ ಇತ್ತೀಚೆಗೆ ಕೊರೋನಾ ಸೋಂಕಿಗೆ ತುತ್ತಾಗುತ್ತಿರುವವರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದು ಈ ನಡುವೆ ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 37,975 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಈ ಕುರಿತು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ದೇಶಾದ್ಯಂತ ಒಂದೇ ದಿನ 37,975 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಈ ಮೂಲಕ ಸೋಂಕು ಪ್ರಕರಣಗಳ ಸಂಖ್ಯೆ 91,77,841ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 480 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,34,218ಕ್ಕೆ ಏರಿಕೆಯಾಗಿದೆ. ಇನ್ನು ನಿನ್ನೆ ಒಂದೇ ದಿನ 42,314 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 86,04,955ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 4,38,667 ಸಕ್ರಿಯ ಪ್ರಕರಣಗಳಿವೆ. : 37,975 - – 24 – .