ಐಎಂಎ ಬಹುಕೋಟಿ ವಂಚನೆ ಪ್ರಕರಣ: ಆರೋಪಿ ಮನ್ಸೂರ್ ಖಾನ್ ನ.27ರವರೆಗೆ ಸಿಬಿಐ ವಶಕ್ಕೆ… ಬೆಂಗಳೂರು,ನವೆಂಬರ್,23,2020(..):ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮನ್ಸೂರ್ ಖಾನ್ ನನ್ನ ನವೆಂಬರ್ 27ರವರೆಗೆ ಸಿಬಿಐ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ಕೋರ್ಟ್ ಗೆ ಆರೋಪಿ ಮನ್ಸೂರ್ ಖಾನ್ ನನ್ನ ಸಿಬಿಐ ಅಧಿಕಾರಿಗಳು ಹಾಜರುಪಡಿಸಿದ್ದರು. ಅಲ್ಲದೆ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ನೀಡುವಂತೆ ಕೋರ್ಟ್ ಗೆ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ಪ್ರಕರಣ ಪ್ರಮುಖ ಆರೋಪಿ ಮನ್ಸೂರ್ ಖಾನ್ ನನ್ನ ನವೆಂಬರ್ 27ರವರೆಗೆ ಸಿಬಿಐ ವಶಕ್ಕೆ ನೀಡಿ ಆದೇಶಿಸಿದೆ. : – - - - – 27 –