ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮಕ್ಕೆ 500 ಕೋಟಿ ರೂ. ಅನುದಾನ ರಿಲೀಸ್… ಬೆಂಗಳೂರು, ನವೆಂಬರ್,23,2020(..):ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ಅನುದಾನವನ್ನ ನೀಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮರಾಠ ಅಭಿವೃದ್ಧಿ ನಿಗಮ ರಚಿಸಿ 50 ಕೋಟಿ ಅನುದಾನ ಮೀಸಲಿಟ್ಟ ಬಳಿಕ ರಾಜ್ಯದಲ್ಲಿ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ಸ್ಥಾಪನೆಗೆ ಕೂಗು ಕೇಳಿ ಬಂದಿತ್ತು. ಈ ಸಂಬಂಧ ಡಿಸಿಎಂ ಲಕ್ಷ್ಮಣ್ ಸವದಿ, ಸಚಿವರಾದ ಬಿ.ಸಿ ಪಾಟೀಲ್ ಸೇರಿ ಹಲವು ಸಚಿವರು ವೀರ ಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡುವಂತೆ ಸಿಎಂ ಬಿಎಸ್ ವೈಗೆ ಮನವಿ ಮಾಡಿದ್ದರು. ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ ಘೋಷಣೆ ಮಾಡಿದ್ದರು. ಆದರೆ ಅಂದು ಅನುದಾನ ಬಿಡುಗಡೆ ಮಾಡಿರಲಿಲ್ಲ. ಇದೀಗ ಇಂದು ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ 500 ಕೋಟಿ ಅನುದಾನ ನೀಡುವ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. .500 - , . 23, 2020 (..): . 500 - . .50 , , .. .. - . - . , . 500 .: - -.500 - - : 500 - - - -.