ಕುತೂಹಲ ಕೆರಳಿಸಿದ ಬಿ.ಎಲ್ ಸಂತೋಷ್ ರಿಂದ ಸಿಎಂ ಬಿಎಸ್ ವೈ ಭೇಟಿ… ನವೆಂಬರ್,23,2020(..): ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಕೆಲಕಾಲ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ಸಚಿವ ಸಂಪುಟ ಪುನರಚನೆ ಅಥವಾ ವಿಸ್ತರಣೆ ಕುರಿತು ಚರ್ಚೆ ನಡೆಯುತ್ತಿದ್ದು, ಈ ಸಂಬಂಧ ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರ ಜತೆ ಸಿಎಂ ಬಿಎಸ್ ಯಡಿಯೂರಪ್ಪ ಚರ್ಚಿಸಿದ್ದರೂ ಹೈಕಮಾಂಡ್ ಮಾತ್ರ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿಲ್ಲ. ಈ ಮಧ್ಯೆ ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ಸಿಎಂ ಅಧಿಕೃತ ನಿವಾಸ ಕಾವೇರಿಗೆ ಬಂದ ಬಿ.ಎಲ್. ಸಂತೋಷ್, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೆಟಿಯಾಗಿ, 15 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ. ಇನ್ನು ಬಿ.ಎಲ್ ಸಂತೋಷ್ ಅವರು ಭೇಟಿಯಾಗಿ ತೆರಳಿದ ನಂತರ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಹ ಸಿಎಂ ಬಿಎಸ್ ವೈ ನಿವಾಸಕ್ಕೆ ಭೇಟಿ ನೀಡಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ. : - - - - .