ಮೈಸೂರು ಡಿಸಿ ರೋಹಿಣಿ ಸಿಂಧೂರಿ ನೇಮಕ ವಿಚಾರ: ಇಂದು ಮಹತ್ವದ ತೀರ್ಪು ಸಾಧ್ಯತೆ… ಮೈಸೂರು,ನವೆಂಬರ್,23,2020(..):ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ವರ್ಗಾವಣೆಯನ್ನ ಪ್ರಶ್ನಿಸಿ ನಿರ್ಗಮಿತ ಡಿಸಿ ಬಿ. ಶರತ್ ಅವರು ಸಲ್ಲಿಸಿದ್ದ ಅರ್ಜಿ ಕುರಿತು ಇಂದು ಮಹತ್ವದ ತೀರ್ಪು ಹೊರಬೀಳಲಿದೆ. ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕವಾದ ಒಂದು ತಿಂಗಳೊಳಗೆ ವರ್ಗಾವಣೆ ಮಾಡಿದ ಸರ್ಕಾರದ ನಿರ್ಧಾರವನ್ನ ಪ್ರಶ್ನಿಸಿ ನಿರ್ಗಮಿತ ಡಿಸಿ ಬಿ.ಶರತ್ ಅವರು ಸಿಎಟಿ ಮೊರೆ ಹೋಗಿದ್ದಾರೆ. ಕಳೆದ ಒಂದು ತಿಂಗಳಿಂದ ಅರ್ಜಿ ವಿಚಾರಣೆ ಸಿಎಟಿ ಅಂಗಳದಲ್ಲಿದ್ದು, ಈ ಅರ್ಜಿ ವಿಚಾರಣೆಯನ್ನ ಸಿಎಟಿ ಈಗಾಗಲೇ ಐದು ಬಾರಿ ಮುಂದೂಡಿಕೆ ಮಾಡಿದೆ, ಇಂದು ಮತ್ತೆ ಅರ್ಜಿ ವಿಚಾರಣೆಗೆ ಬರಲಿದೆ. ಹೀಗಾಗಿ ಇಂದು ಅರ್ಜಿ ವಿಚಾರಣೆ ನಡೆಸಲಿರುವ ಸಿಎಟಿ ಮಹತ್ವದ ತೀರ್ಪು ನೀಡುವ ಸಾಧ್ಯತೆ ಇದ್ದು, ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರೇ ಮುಂದುವರೆಯುತ್ತಾರೆಯೇ ಇಲ್ಲವೇ ಎಂಬುದು ನಿರ್ಧಾರವಾಗಲಿದೆ. : - - - –- – .