ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಅಲೆ: 2028ರಲ್ಲೂ ನಾವೇ ಅಧಿಕಾರಕ್ಕೆ- ಸಿಎಂ ಸಿದ್ದರಾಮಯ್ಯ. ಬೆಂಗಳೂರು,ಏಪ್ರಿಲ್,19,2024 (..):ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಅಲೆ ಇದೆ. ಹೀಗಾಗಿ 2028ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ಬಿಜೆಪಿ ಜೆಡಿಎಸ್ ನವರು ಕಂಗೆಟ್ಟಿದ್ದಾರೆ. ಅದಕ್ಕಾಗಿ ಬಾಯಿಗೆ ಬಂದಂತೆ ಟೀಕೆ ಮಾಡುತ್ತಿದ್ದಾರೆ. ಮೊದಲು ಗ್ಯಾರಂಟಿ ಜಾರಿ ಮಾಡಲು ಆಗಲ್ಲ ಎಂದಿದ್ದರು. ಇದೀಗ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆ ನಿಲ್ಲಿಸುತ್ತಾರೆ ಎಂದಿದ್ದಾರೆ. ನಾವು ಬಿಜೆಪಿತರದವರಲ್ಲ ಮಾತು ಕೊಟ್ಟಂತೆ ನಡೆದುಕೊಳ್ಳುವವರು. 2028ರಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲೂದು. ಆಗಲೂ 5 ಗ್ಯಾರಂಟಿ ಮುಂದುವರೆಸುತ್ತೇವೆ ಎಂದರು. ಮಾಲೀಕತ್ತ ಗುತ್ತೇದಾರ್ ಕಾಂಗ್ರೆಸ್ ಗೆ ಮರುಸೇರ್ಪಡೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮಾಲೀಕಯ್ಯ ಗುತ್ತೇದಾರರ ಅಂತವರಿಗೆ ಬಿಜೆಪಿಯಲ್ಲಿರು ಕಷ್ಟವಾಗುತ್ತೆ. ಸಾಮಾಜಿಕ ನ್ಯಾಯದ ಪರವಾಗಿ ಇದ್ದವರಿಗೆ ಕಷ್ಟವಾಗುತ್ತೆ. ಮಾಲೀಕಯ್ಯ ಬಂದಿದ್ದರಿಂದ ರಾಜ್ಯದ ಮೇಲೆ ಪರಿಣಾಮ ಬೀರುತ್ತೆ ಕಾಂಗ್ರೆಸ್ ಗೆ ಇದರಿಂದ ಶಕ್ತಿ ಬರುತ್ತೆ ಎಂದು ಭಾವಿಸಿದ್ದೇನೆ ಎಂದರು. : , , ,