ದೇಶದಲ್ಲಿ 90 ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ… ನವದೆಹಲಿ,ನವೆಂಬರ್,20,2020(..):ದೇಶದಲ್ಲಿ ಕೊರೋನಾ ಮಹಾಮಾರಿ ಇತ್ತೀಚೆಗೆ ಕಡಿಮೆಯಾಗುತ್ತಿದ್ದು, ಈ ನಡುವೆ ದೇಶದಲ್ಲಿ ಕೊರೋನಾ ಸೋಂಕಿತ ಸಂಖ್ಯೆ 90,04,366ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 45,882 ಮಂದಿಗೆ ಕೊರೋನಾ ಸೋಂಕು ತಗುಲಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 90 ಲಕ್ಷ ಗಡಿ ದಾಟಿದೆ. ಇನ್ನು ಒಂದೇ ದಿನ ಕೊರೋನಾ ಮಹಾಮಾರಿಗೆ 584 ಜನರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,32,162ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,43,794 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 84,28,410 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 44,807 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 12,95,91,786 ಜನರನ್ನು ಸ್ಯಾಂಪಲ್ ಟೆಸ್ಟ್ ಗೆ ಒಳಪಡಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ. …. 90 , 20, 2020 (..): 90,04,366. 45,882 24 90 . 584 . 1,32,162.: -19/ / : - -- 90 – .