ಡಿ.5 ರಂದು ಕರ್ನಾಟಕ ಬಂದ್: ಕನ್ನಡಪರ ಸಂಘಟನೆಗಳ ಒಕ್ಕೊರಲ ನಿರ್ಧಾರ… ಬೆಂಗಳೂರು,ನವೆಂಬರ್,20,2020(..):ಮರಾಠ ಅಭಿವೃದ್ದಿ ನಿಗಮ ರಚನೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಲು ಕನ್ನಡಪರ ಸಂಘಟನೆಗಳು ಒಕ್ಕೊರಲ ನಿರ್ಧಾರ ಕೈಗೊಂಡಿವೆ. ಮರಾಠ ಅಭಿವೃದ್ದಿ ನಿಗಮ ರಚನೆ ಖಂಡಿಸಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದರು. ಈ ಸಂಬಂಧ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಹೋಟೆಲ್ ನಲ್ಲಿ ಕನ್ನಡಪರ ಸಂಘಟನೆಗಳ ಕನ್ನಡ ಒಕ್ಕೂಟ ಸಭೆ ನಡೆಯಿತು. ಸಭೆಯಲ್ಲಿ ಚರ್ಚಿಸಿ ಇದೀಗ ಮರಾಠ ಅಭಿವೃದ್ದಿ ನಿಗಮ ರಚನೆ ಖಂಡಿಸಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ. ಸಭೆ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್ ಮರಾಠ ಅಭಿವೃದ್ದಿ ನಿಗಮ ರಚನೆ ವಿರೋಧಿಸಿ ಡಿಸೆಂಬರ್ 5 ರಂದು ಬೆಳಿಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಬಂದ್ ಮಾಡಲಾಗುತ್ತದೆ. ನವೆಂಬರ್ 30ರೊಳಗೆ ಮರಾಠ ಅಭಿವೃದ್ದಿ ನಿಗಮ ರಚನೆ ಹಿಂಪಡೆಯಬೇಕು ಇಲ್ಲದಿದ್ದರೇ ಬಂದ್ ಮಾಡಲಾಗುತ್ತದೆ ಎಂದು ತಿಳಿಸಿದರು. ….. . 5: - , . 20, 2020 (..): 5, 2020, . 30 5 6 6pm.: / 5/ / : - - 5- –