ಮೈಸೂರು: ಹನಿಟ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್ ಬಂಧಿಸಿದ ಪೊಲೀಸರು… ಮೈಸೂರು,ನವೆಂಬರ್,20,2020(..) :ಹನಿಟ್ರ್ಯಾಪ್ ಮಾಡುತ್ತಿದ್ದ ಯುವತಿ ಸೇರಿ ಐವರನ್ನ ಮೈಸೂರಿನ ಕುವೆಂಪುನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣದ ನವೀನ್, ಶಿವರಾಜು, ಹರೀಶ್, ವಿಜಿ ಹಾಗೂ ಹುಣಸೂರಿನ ಯುವತಿ ಅನಿತ ಬಂಧಿತ ಆರೋಪಿಗಳು. ಡಾ. ಪ್ರಕಾಶ್ ಬಾಬು ಎಂಬುವವರ ದೂರಿನ ಮೇರೆಗೆ ಆರೋಪಿಗಳನ್ನ ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಖಾಸಗಿ ವಿಡಿಯೋ ಮಾಡಿ ಡಾ. ಪ್ರಕಾಶ್ ಬಾಬು ಅವರಿಗೆ 1 ಕೋಟಿ ರೂ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಪ್ರಕಾಶ್ ಬಾಬು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಹನಿಟ್ರ್ಯಾಪ್ ಗ್ಯಾಂಗ್ ಅನ್ನ ಕುವೆಂಪುನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. : - –- –