ಸಿಎಂ ಮಾಧ್ಯಮ ಸಲಹೆಗಾರ ಹುದ್ದೆಗೆ ಮಹದೇವ್ ಪ್ರಕಾಶ್ ರಾಜೀನಾಮೆ ಸಲ್ಲಿಕೆ… ಬೆಂಗಳೂರು,ನವೆಂಬರ್,19,2020(..):ಸಿಎಂ ಮಾಧ್ಯಮ ಸಲಹೆಗಾರ ಹುದ್ದೆಗೆ ಮಹದೇವ್ ಪ್ರಕಾಶ್ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾಗಿ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ನೇಮಕಗೊಂಡಿದ್ದರು. ಇದೀಗ ಸಿಎಂ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್ ಅವರು, ತಮ್ಮ ಸಿಎಂ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮಹದೇವ್ ಪ್ರಕಾಶ್ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕಳೆದ ಒಂದು ವರ್ಷದಿಂದ ಮಾಧ್ಯಮ ಸಲಹೆಗಾರರಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಹೃದಯ ಪೂರ್ವಕ ಧನ್ಯವಾದಗಳು. ನನ್ನ ವೈಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡುತ್ತಿರುವುದಾಗಿ ರಾಜೀನಾಮೆ ಪತ್ರದಲ್ಲಿ ಮಹದೇವ್ ಪ್ರಕಾಶ್ ತಿಳಿಸಿದ್ದಾರೆ. … , . 19, 2020 (..): , . .. , . .: -- : - – - -