ಸೂರ್ಯ ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ್ದು- ಡಿಸಿಎಂ ಲಕ್ಷ್ಮಣ್ ಸವದಿ ಟಾಂಗ್… ಬೆಂಗಳೂರು, ನವೆಂಬರ್,18,2020(..):ಬೆಳಗಾವಿ, ಕಾರವಾರ ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ಹೇಳಿಕೆ ನೀಡುವ ಮೂಲಕ ಕಿಡಿಹೊತ್ತಿಸಿರುವ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಗೆ ಕರ್ನಾಟಕ ಡಿಸಿಎಂ ಲಕ್ಷ್ಮಣ್ ಸವದಿ ತಿರುಗೇಟು ನೀಡಿದ್ದಾರೆ. ಈ ಹೇಳಿಕೆ ಕುರಿತು ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ ಲಕ್ಷ್ಮಣ್ ಸವದಿ, ಸೂರ್ಯಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ್ದು. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ. ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿಕೆಯನ್ನ ಖಂಡಿಸುತ್ತೇನೆ ಎಂದು ತಿರುಗೇಟು ನೀಡಿದ್ದಾರೆ. ಬೆಳಗಾವಿ, ಕಾರವಾರ ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ಹೇಳಿಕೆ ನೀಡಿರುವ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ವಿರುದ್ಧ ರಾಜ್ಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ. : – – – – – -