ಡಿ.5 ರಂದು ಬಲವಂತದ ಬಂದ್ ಮಾಡಿದ್ರೆ ನಿರ್ದಾಕ್ಷಿಣ್ಯ ಕ್ರಮ- ಸಿಎಂ ಬಿ.ಎಸ್ ಯಡಿಯೂರಪ್ಪ ಎಚ್ಚರಿಕೆ… ಬೆಂಗಳೂರು,ನವೆಂಬರ್,18,2020(..):ಇಲ್ಲಿರುವ ಮರಾಠಿಗರು ಸಹ ನಮ್ಮ ಕನ್ನಡಿಗರೇ. ಅವರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ. ಹೀಗಾಗಿ ಡಿಸೆಂಬರ್ 5 ರಂದು ಬಂದ್ ಮಾಡುವ ಅಗತ್ಯವಿಲ್ಲ. ಒಂದು ವೇಳೆ ಬಲವಂತದಿಂದ ಬಂದ್ ಮಾಡಿದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಡಿಸೆಂಬರ್ 5 ರಂದು ಬಂದ್ ಮಾಡುವ ಅಗತ್ಯವಿಲ್ಲ. ಹೀಗಾಗಿ ಯಾರೂ ಕೂಡ ಕರ್ನಾಟಕ ಬಂದ್ ಗೆ ಕರೆ ನೀಡಬಾರದು. ಬಲವಂತದಿಂದ ಬಂದ್ ಮಾಡಿದರೇ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದರು. ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು ನವೆಂಬರ್ 27ರೊಳಗೆ ಪ್ರಾಧಿಕಾರ ರಚನೆ ನಿರ್ಧಾರ ಹಿಂಪಡೆಯದಿದ್ದರೇ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗುತ್ತದೆ ಎಂದು ಎಚ್ಚರಿಕೆ ನೀಡಿವೆ. …. . 5Bengaluru, . 18, 2020 (..): - 5 . , .. . - 5, ’ . : – 5- - -.