ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ನಿಂದ ಅಚ್ಚರಿಯ ಅಭ್ಯರ್ಥಿ ಆಯ್ಕೆ… ಬೆಂಗಳೂರು, ನವೆಂಬರ್,17,2020(..):ಅಶೋಕ್​ ಗಸ್ತಿ ಅವರ ನಿಧನದಿಂದ ತೆರವಾಗಿರುವ ರಾಜ್ಯಸಭೆ ಸ್ಥಾನಕ್ಕೆ ಡಿಸೆಂಬರ್ 1 ರಂದು ಉಪಚುನಾವಣೆ ನಡೆಯಲಿದ್ದು, ಈ ಸ್ಥಾನಕ್ಕೆ ಬಿಜೆಪಿ ಹೈಕಮಾಂಡ್ ಅಚ್ಚರಿಯ ಅಭ್ಯರ್ಥಿಯನ್ನ ಆಯ್ಕೆ ಮಾಡಿದೆ. ರಾಜ್ಯಸಭೆ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಂಗಳೂರು ಮೂಲದ ಡಾ. ಕೆ. ನಾರಾಯಣ್ ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ರಾಜ್ಯಸಭೆ ಸದಸ್ಯರಾಗಿದ್ದ ಅಶೋಕ್ ಗಸ್ತಿ ಕರೊನಾ ಸೋಂಕಿನಿಂದ ಇತ್ತೀಚಿಗೆ ಮೃತಪಟ್ಟಿದ್ದರು. ಗಸ್ತಿ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಡಿಸೆಂಬರ್ 1 ರಂದು ಮತದಾನ ನಡೆಯಲಿದ್ದು, ಬಿಜೆಪಿಯು ಉದ್ಯಮಿ ನಾರಾಯಣ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ರಾಜ್ಯ ಬಿಜೆಪಿ ಕೋರ್ ಕಮಿಟಿ ಕಳುಹಿಸಿದ್ದ ಹೆಸರನ್ನ ಹೈಕಮಾಂಡ್ ತಿರಸ್ಕರಿಸಿ ನಾರಾಯಣ್ ಅವರನ್ನ ಬಿಜೆಪಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ನಾರಾಯಣ್ ದೇವಾಂಗ ಸಮುದಾಯಕ್ಕೆ ಸೇರಿದವರಾಗಿದ್ದಾರೆ. …. : . . , . 17, 2020 (..): 1. . . . . . .: -. .- : - – - - -