ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಎರಡು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ… ಬೆಂಗಳೂರು,ನವೆಂಬರ್,17,2020(..):ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಾಟೆ ಮತ್ತು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ರನ್ನ ಎರಡು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸಿಸಿಬಿ ಪೊಲೀಸರು ಸಂಪತ್ ರಾಜ್ ರನ್ನ ಬಂಧಿಸಿದ್ದರು. ನಂತರ ಇಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ಸಂಪತ್ ರಾಜ್ ಅವರನ್ನ ಹಾಜರುಪಡಿಸಲಾಗಿತ್ತು. ಇನ್ನು ಸಂಪತ್ ರಾಜ್ ರನ್ನ 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಸಿಸಿಬಿ ಪರ ವಕೀಲರು ಕೋರಿದ್ದರು. ಆದರೆ ಸಂಪತ್ ರಾಜ್ ಅವರನ್ನ ಎರಡು ದಿನಗಳ ಕಾಲ ಅಂದರೇ ನವೆಂಬರ್ 19ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆದೇಶಿಸಿದೆ. : - - –- –