ಬೈಕ್ ಗೆ ಕಾರು ಡಿಕ್ಕಿಯಾಗಿ 5 ವರ್ಷದ ಮಗು ಸಾವು: ದಂಪತಿಗೆ ಗಂಭೀರ ಗಾಯ ಮೈಸೂರು,ಸೆಪ್ಟಂಬರ್,23,2024 (..):ಹಿಂಬದಿಯಿಂದ ಬೈಕ್ ಗೆ ಕಾರು ಡಿಕ್ಕಿಯಾಗಿ 5 ವರ್ಷದ ಮಗು ಸಾವನ್ನಪ್ಪಿ ದಂಪತಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಇಲವಾಲದ ಪೆಟ್ರೋಲ್ ಬಂಕ್ ಬಳಿ ಈ ಅಪಘಾತ ಸಂಭವಿಸಿದೆ. ಲಿಖಿತ್ ಮೃತ ಬಾಲಕ.ರಸ್ತೆಯಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದ ದಂಪತಿಗೆ ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ತಾಯಿ ಮಗು ಇಬ್ಬರು ಹಾರಿ ಬಿದ್ದಿದ್ದಾರೆ. ಈ ವೇಳೆ ರಸ್ತೆಗೆ ಬಿದ್ದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಮಗುವಿನ ತಂದೆ-ತಾಯಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. : , , , , ,