ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ.. ಬೆಂಗಳೂರು,ನವೆಂಬರ್,17,2020(..):ರಾಜ್ಯದಲ್ಲಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಪಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸರ್ಕಾರ ಮುಂದಾಗಿತ್ತು. ಈ ಬೆನ್ನಲ್ಲೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಡ ಹೆಚ್ಚಾಗಿತ್ತು. ನಿನ್ನೆ ಸ್ವಪಕ್ಷಿಯ ನಾಯಕರೇ ಆದ ಡಿಸಿಎಂ ಲಕ್ಷ್ಮಣ್ ಸವದಿ, ಸಚಿವರಾದ ವಿ.ಸೋಮಣ್ಣ, ಬಿ.ಸಿ ಪಾಟೀಲ್ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಒತ್ತಡ ಹಾಕಿದ್ದರು. ಜತೆಗೆ ನಿನ್ನೆಯಷ್ಟೇ ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸುದೀರ್ಘ ಪತ್ರ ಬರೆದು, ಲಿಂಗಾಯತ ಅಭಿವೃದ್ಧಿ ನಿಗಮದ ಜೊತೆಗೆ, ಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ಕಲ್ಪಿಸಿಕೊಂಡುವಂತೆ ಮನವಿ ಮಾಡಿದ್ದರು. ಇದೀಗ ಒತ್ತಡಕ್ಕೆ ಮಣಿದಿರುವ ಸಿಎಂ ಬಿಎಸ್ ಯಡಿಯೂರಪ್ಪ ತಕ್ಷಣದಿಂದ ಜಾರಿಗೆ ಬರುವಂತೆ ನಿಗಮ ಸ್ಥಾಪನೆಗೆ ಆದೇಶ ಹೊರಡಿಸಿದ್ದಾರೆ. ಆದರೆ ನಿಗಮಕ್ಕೆ ಅನುದಾನ ಮೀಸಲು ಘೋಷಣೆ ಮಾಡಿಲ್ಲ. …. - - , . 17, 2020 (..): , . , .. .. - . , . .. .. 16 . .. , . : – -