ಹ್ಯಾಂಗ್ ಓವರ್ ಪಬ್ ನಲ್ಲಿ ಭಾರಿ ಅಗ್ನಿ ಅವಘಡ ಬೆಂಗಳೂರು,ನವೆಂಬರ್,16,2020(..); ನಗರದ ಎಚ್ಎಸ್ ಆರ್ ಲೇಔಟ್ ನಲ್ಲಿರುವ ಹ್ಯಾಂಗ್ ಓವರ್ ಪಬ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಮಧ್ಯಾಹ್ನ ಸುಮಾರು 12.25ಕ್ಕೆ ಪಬ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ್ದ 3 ಅಗ್ನಿಶಾಮಕ ವಾಹನಗಳು ಹಾಗೂ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ; ---