ಮರಾಠ ಪ್ರಾಧಿಕಾರ ರಚನೆಗೆ ಮುಂದಾದ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ಕಿಡಿ: ಸಿಎಂ ರಾಜೀನಾಮೆಗೆ ಆಗ್ರಹ…. ಬೆಂಗಳೂರು,ನವೆಂಬರ್,15,2020(..):ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ಬೆನ್ನಲ್ಲೆ ಇದೀಗ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತದೆ. ಹೀಗಾಗಿ ಸಿಎಂ ಬಿಎಸ್ ಯಡಿಯೂರಪ್ಪ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಇಂದು ಮರಾಠಿ, ನಾಳೆ ತಮಿಳು, ನಾಡಿದ್ದು ತೆಲುಗು,, ಹೀಗೆ ಆಗೋಕೆ ನಾವು ಬಿಡಲ್ಲ… ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಹಿಂದೆ ಪಿತೂರಿ ಇದೆ. ಇದರ ಹಿಂದೆ ಮೋದಿ ಸಹ ಇದ್ದಾರೆ. ಇಂತಹ ಪರಿಸ್ಥಿತಿ ಯಾವತ್ತೂ ಬಂದಿರಲಿಲ್ಲ. ಇಂದು ಮರಾಠಿ, ನಾಳೆ ತಮಿಳು, ನಾಡಿದ್ದು ತೆಲುಗು,, ಹೀಗೆ ಆಗೋಕೆ ನಾವು ಬಿಡಲ್ಲ. ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಹಿಂಪಡೆಯಲೇಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. : - - – -