ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ರಮೇಶ್ ಕತ್ತಿ ಆಯ್ಕೆ… ಬೆಳಗಾವಿ,ನವೆಂಬರ್,14,2020(..):ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು ನಡೆಯಿತು. ರಮೇಶ ಕತ್ತಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷ ಸುಭಾಷ ಢವಳೇಶ್ವರ ಅವಿರೋಧವಾಗಿ ಆಯ್ಕೆಯಾದರು. ರಾಜ್ಯದ ಪ್ರತಿಷ್ಠಿತ ಬ್ಯಾಂಕ್‍ಗಳಲ್ಲಿ ಬೆಳಗಾವಿಯ ಡಿಸಿಸಿ ಬ್ಯಾಂಕ್ ಕೂಡ ಒಂದಾಗಿದೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಭಾರೀ ವಿರೋಧಗಳು ವ್ಯಕ್ತವಾಗಿದ್ದವು. ಇದರ ನಡುವೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ರಮೇಶ್ ಕತ್ತಿ ಮತ್ತು ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಚುನಾವಣಾಧಿಕಾರಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ರಮೇಶ್ ಕತ್ತಿ ಮೂರನೇ ಬಾರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. : - –- -