ರಾಜೀವ್ ಗಾಂಧಿ ಆರೋಗ್ಯ ವಿವಿ ವ್ಯಾಪ್ತಿಯ ಎಲ್ಲಾ ಕಾಲೇಜುಗಳು ಡಿ.1ರಿಂದ ಆರಂಭ… ಬೆಂಗಳೂರು,ನವೆಂಬರ್,13,2020(..):ರಾಜೀವ್ ಗಾಂಧಿ ವಿಶ್ವವಿದ್ಯಾಲಯ ವ್ಯಾಪ್ತಿಯ ಮೆಡಿಕಲ್ ಕಾಲೇಜುಗಳನ್ನು ಡಿಸೆಂಬರ್ 1 ರಿಂದ ಆರಂಭಿಸಲು ತೀರ್ಮಾನಿಸಲಾಗಿದೆ‌ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು. ಈ ಕುರಿತು ಟ್ವೀಟ್ ಮಾಡಿರುವ ಸಚಿವ ಡಾ.ಕೆ ಸುಧಾಕರ್, ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ & ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಾಲೇಜುಗಳ ಆಡಳಿತ ಮಂಡಳಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ. … . 1Bengaluru, . 13, 2020 (..): . . , , , , 1. . (@mla_sudhakar) : , ,, , 1st . & 2 . : – - – 1-