ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಮೂವರು ಸಾವು… ಚಾಮರಾಜನಗರ,ನವೆಂಬರ್,13,2020(..):ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕಿನಲ್ಲಿ ನಡೆದಿದೆ. ಕೊಳ್ಳೆಗಾಲ ತಾಲೂಕಿನ ಧನಗೆರೆ-ಸತ್ತೇಗಾಲ ಮುಖ್ಯರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಡೇವಿಡ್, ಸೇತು, ಶೇಷುರಾಜ್ ಮೃತಪಟ್ಟ ಬೈಕ್ ಸವಾರರು. ಮೃತಪಟ್ಟವರು ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪದ ಪಳನಿಮೇಡು ಗ್ರಾಮದವರು ಎನ್ನಲಾಗಿದೆ. ಕೊಳ್ಳೇಗಾಲದಿಂದ ಮಳವಳ್ಳಿ ಕಡೆಗೆ ಬೈಕ್​ ನಲ್ಲಿ ಹೋಗುತ್ತಿದ್ದ ವೇಳೆ ಮಳವಳ್ಳಿಯಿಂದ ಕೊಳ್ಳೇಗಾಲ ಕಡೆಗೆ ಬರುತ್ತಿದ್ದ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಈ ಕುರಿತು ಕೊಳ್ಳೆಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - -