ಈ ಕಾರಣದಿಂದಾಗಿಯೇ ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ ಗೆಲುವು ಸಾಧಿಸುತ್ತಿದೆ ಎಂದ ಬಿವೈ ವಿಜಯೇಂದ್ರ…. ಕಲ್ಬರ್ಗಿ,ನವೆಂಬರ್,13,2020(..):ಬಿಜೆಪಿ ಎಲ್ಲಾ ಸಮುದಾಯವನ್ನು ಒಂದೇ ರೀತಿ ನೋಡುತ್ತದೆ. ಹೀಗಾಗಿ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಗೆಲ್ಲುತ್ತಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ. ಕಲ್ಬರ್ಗಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಬಿವೈ ವಿಜಯೇಂದ್ರ, ಕಾಂಗ್ರೆಸ್ ಮತ್ತು ಜೆಡಿಎಸ್ ಗಳು ಜಾತಿ ಆಧಾರದ ಮೇಲೆ ರಾಜಕೀಯ ಮಾಡುತ್ತಾರೆ. ಆದರೆ ಬಿಜೆಪಿ ಎಲ್ಲಾ ಸಮುದಾಯವನ್ನ ಒಂದೇ ರೀತಿಯಲ್ಲಿ ಕಾಣುತ್ತದೆ. ಅದ್ದರಿಂದ ಬಿಜೆಪಿಗೆ ಗೆಲುವು ಸಿಗುತ್ತಿದೆ ಎಂದು ಹೇಳಿದರು. ಬೀದರ್ ಜಿಲ್ಲೆ ಬಸವಕಲ್ಯಾಣ ಉಪಚುನಾವಣೆ ಕುರಿತು ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ, ನಾನು ಟಿಕೆಟ್ ಆಕಾಂಕ್ಷಿಯಲ್ಲ. ಅಭ್ಯರ್ಥಿಯನ್ನ ಹೈಕಮಾಂಡ್ ಆಯ್ಕೆ ಮಾಡುತ್ತದೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು. : - – – –