ಪತ್ರಕರ್ತ ರವಿ ಬೆಳಗೆರೆ ನಿಧನಕ್ಕೆ ಗಣ್ಯರಿಂದ ಸಂತಾಪ ಬೆಂಗಳೂರು,ನವೆಂಬರ್,13,2020 : ಪತ್ರಕರ್ತ, ಬರಹಗಾರ ರವಿ ಬೆಳಗೆರೆ ನಿಧನಕ್ಕೆ ಹಲವು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ನಿಧನಕ್ಕೆ ಸಂತಾಪ ಸೂಚಿಸಿದ್ದು, ನಿಧನ ಸುದ್ದಿ ಕೇಳಿ ದುಃಖವಾಗಿದೆ. ಪತ್ರಕರ್ತರಾಗಿ, ಲೇಖಕರಾಗಿ, ನಿರೂಪಕರಾಗಿ ಜನಪ್ರಿಯತೆ ಗಳಿಸಿದ್ದ ಅವರು, ಶಿಕ್ಷಣ ಸಂಸ್ಥೆಯನ್ನೂ ನಡೆಸುತ್ತಿದ್ದರು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬದವರಿಗೆ, ಅಭಿಮಾನಿಗಳಿಗೆ, ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ಟ್ವೀಟ್ ಮಾಡಿದ್ದು, ಅಕ್ಷರ ಗಾರುಡಿಗ, ಹಿರಿಯ ಪತ್ರಕರ್ತ, ಕಾದಂಬರಿಕಾರ, ಹಾಯ್ ಬೆಂಗಳೂರು ಸಂಪಾದಕ, ಅತ್ಯುತ್ತಮ ವಾಗ್ಮಿ ರವಿ ಬೆಳಗೆರೆ ಅವರ ನಿಧನ ಕನ್ನಡ ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ. ಕನ್ನಡ ಸಾಹಿತ್ಯ ಲೋಕದಲ್ಲಿ ಸ್ಟಾರ್ ಬರಹಗಾರರಾಗಿ ಗುರುತಿಸಿ ನಿಂತರು, ಅವರ ಅಕ್ಷರಗಳು ಎಂದಿಗೂ ಅಜರಾಮರ. ಅವರಿಗೆ ನನ್ನ ಅಂತಿಮ ನಮನಗಳು ಎಂದು ತಿಳಿಸಿದ್ದಾರೆ. …. ’ , . 13, 2020 (..): .. . ’ , , .: - - : - --