ಚಿತ್ರದುರ್ಗ ಜಿಲ್ಲೆಗೆ ದೀಪಾವಳಿ ಗಿಫ್ಟ್: ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಒಪ್ಪಿಗೆ… ಬೆಂಗಳೂರು,ನವೆಂಬರ್,12,2020(..):ಚಿತ್ರದುರ್ಗ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸರ್ಕಾರ ಸಮ್ಮತಿ ಸೂಚಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಿಎಂ ಯಡಿಯೂರಪ್ಪ ನೇತೃತ್ವದ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ. ಈ ಮೂಲಕ ಚಿತ್ರದುರ್ಗದ ಜನರಿಗೆ ದೀಪಾವಳಿ ಗಿಫ್ಟ್ ಆಗಿ ರಾಜ್ಯ ಸರ್ಕಾರ ನೀಡಿದೆ. ಈ ಸಂಬಂಧ ಮೆಡಿಕಲ್ ಕಾಲೇಜು ನಿರ್ಮಾಣ ಸಂಬಂಧ 60 ಕೋಟಿ ಅನುದಾನ ರಿಲೀಸ್ ಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಅಂದಹಾಗೇ, ಈ ಹಿಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕಾಗಿ ಬಿಡುಗಡೆ ಮಾಡಬೇಕಿದ್ದ ಅನುದಾನಕ್ಕೆ ತಡೆ ನೀಡಿತ್ತು. ಇದೀಗ ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಬಿಎಸ್ ವೈ ನೇತೃತ್ವದ ಬಿಜೆಪಿ ಸರ್ಕಾರ ಹಸಿರು ನಿಶಾನೆ ತೋರಿದೆ. … .: , . 12, 2020 (..): . .. , . . 60 . . . : – - - – .