ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಮಾಹಿತಿಯಿದೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪ ಮಂಗಳೂರು,ನವೆಂಬರ್,12,2020(..): ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮಗೆ ಸೋಲಾಗಿದೆ. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಮಾಹಿತಿಯಿದ್ದು, ಈ ಕುರಿತು ಸಮಗ್ರವಾಗಿ ಚರ್ಚೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆ ಫಲಿತಾಂಶ ಕುರಿತು ಮಾತನಾಡಿದ ಅವರು, ವಿದ್ಯಾವಂತರು ಕಾಂಗ್ರೆಸ್ ಗೆ ಮತ ಹಾಕಿದ್ದೇವೆ ಎನ್ನುತ್ತಿದ್ದಾರೆ. ಆದರೆ, ಮತ ಬಿದ್ದಿರೋದು ತಪ್ಪಿದೆಯಾ ಈ ಕುರಿತು ತನಿಖೆ ನಡೆಸುತ್ತೇವೆ. : --..---