ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ : ಶಾಲೆ ಆರಂಭ ನಿರ್ಧಾರ ಮುಂದೂಡಿದ ತಮಿಳುನಾಡು ಸರಕಾರ ಬೆಂಗಳೂರು,ನವೆಂಬರ್,12,2020(..): ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಶಾಲೆ ಆರಂಭ ನಿರ್ಧಾರವನ್ನು ಮುಂದೂಡಲಾಗಿದೆ. ನ.16ರಂದು 9ರಿಂದ 12ನೇ ತರಗತಿಯವರೆಗೆ ಶಾಲೆ ಆರಂಭಿಸಲು ತೀರ್ಮಾನಿಸಲಾಗಿತ್ತು. ಆದರೆ, ಕೊರೊನಾ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಏರಿಕೆಯ ಹಿನ್ನೆಲೆಯಲ್ಲಿ ಸಧ್ಯಕ್ಕೆ ಈ ನಿರ್ಧಾರವನ್ನು ಕೈಬಿಟ್ಟಿದೆ. ಕೊರೊನಾ ಅಟ್ಟಹಾಸ ಕಡಿಮೆಯಾದ ಬಳಿಕ ಶಾಲೆ ಆರಂಭದ ಬಗ್ಗೆ ನಿರ್ಧಾರಿಸಿ, ಶಾಲೆ ಆರಂಭಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಮಿಳುನಾಡು ಸರಕಾರವು ತೀರ್ಮಾನ ಕೈಗೊಂಡಿದೆ. : ------- -