ರಾಜ್ಯದಲ್ಲಿ ಶಾಲೆಗಳ ಆರಂಭ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ- ಸಿಎಂ ಬಿಎಸ್ ವೈ ಹೇಳಿಕೆ… ಬೆಂಗಳೂರು,ನವೆಂಬರ್,12,2020(..):ಕೊರೋನಾ ನಡುವೆ ರಾಜ್ಯದಲ್ಲಿ ಶಾಲೆಗಳ ಆರಂಭ ಕುರಿತು ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು 22 ವಿಷಯಗಳ ಮೇಲೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಈ ವೇಳೆ ರಾಜ್ಯದಲ್ಲಿ ಶಾಲೆಗಳ ಆರಂಭ ಕುರಿತು ಚರ್ಚೆ ನಡೆಸಲಿದ್ದು ಸಿಎಂ ಬಿಎಸ್ ಯಡಿಯೂರಪ್ಪ ಸಚಿವರಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಿಎಸ್ ವೈ, ಶಾಲೆ ಆರಂಭದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದರು. : – - – - -