ಭೀಕರ ಅಪಘಾತ : ಮೂವರು ವಿದ್ಯಾರ್ಥಿಗಳು ಸಾವು… ರಾಯಚೂರು,ನವೆಂಬರ್,11,11,2020(..):ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ಸಮೀಪದ ಮಂಜರ್ಲಾ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಅಭಿಷೇಕ್, ಬಸವರಾಜ್, ಗಣೇಶ್ ಮೃತಪಟ್ಟ ವಿದ್ಯಾರ್ಥಿಗಳು. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು ಅವರನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳು ಮೆಡಿಕಲ್ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಈ ಕುರಿತು ಯರಗೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - - .