ಮಲೆಮಹದೇಶ್ವರ ಬೆಟ್ಟಕ್ಕೆ 3 ದಿನ, ಕೊಂಗಳ್ಳಿ ಬೆಟ್ಟಕ್ಕೆ 2 ತಿಂಗಳು ಭಕ್ತರ ಪ್ರವೇಶಕ್ಕೆ ನಿರ್ಬಂಧ ಚಾಮರಾಜನಗರ,ನವೆಂಬರ್,11,2020 :ಸಾಂಕ್ರಾಮಿಕ ರೋಗ ಕೊರೊನಾ ಹರಡುವ ಭೀತಿಯಿಂದ ದೀಪಾವಳಿ ವಿಶೇಷ ಪೂಜೆಯಲ್ಲಿ ಜನದಟ್ಟಣೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಹನೂರು ತಾಲೂಕಿನ‌ ಮಲೆಮಹದೇಶ್ವರ ಬೆಟ್ಟಕ್ಕೆ 3 ದಿನ ಹಾಗೂ ಕರ್ನಾಟಕದ ಗಡಿಯಲ್ಲಿರುವ ಕೊಂಗಳ್ಳಿ ಬೆಟ್ಟಕ್ಕೆ 2 ತಿಂಗಳು ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.‌ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ತಾಳವಾಡಿ ತಾಲೂಕಿನ ಕೊಂಗಳ್ಳಿ ಬೆಟ್ಟಕ್ಕೆ ನ.15 ರಿಂದ 2021ರ ಜ.12ರವರೆಗೆ ಭಕ್ತರ ಪ್ರವೇಶವನ್ನು ಸಂಪೂರ್ಣ ನಿರ್ಬಂಧಿಸುವ ಕ್ರಮವನ್ನು ತಮಿಳುನಾಡಿನ ಜಿಲ್ಲಾಡಳಿತ ಕೈಗೊಂಡಿದೆ ಎಂದು ದೇವಾಸ್ಥಾನದ ಅರ್ಚಕ ಮಲ್ಲಿಕಾರ್ಜುನ ಮಾಹಿತಿ ನೀಡಿದ್ದಾರೆ. ದೀಪಾವಳಿ ರಥೋತ್ಸವ ರದ್ದು ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುವ ದೀಪಾವಳಿ ರಥೋತ್ಸವವನ್ನು ರದ್ದುಗೊಳಿಸಲಾಗಿದೆ. ದೀಪಾವಳಿ ವೇಳೆ ಬೆಟ್ಟಕ್ಕೆ 2.5 ರಿಂದ 3 ಲಕ್ಷ ಭಕ್ತಾದಿಗಳು ಹರಿದು ಬರುವುದರಿಂದ ಕೊರೊನಾ ಮುಂಜಾಗ್ರತಾ ಕ್ರಮವಾಗಿ ನ.13ರ ಸಂಜೆ 7 ರಿಂದ 16ರ ಬೆಳಗ್ಗೆ 7ರವರೆಗೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಆದರೆ, ಸಾಂಪ್ರದಾಯಿಕವಾಗಿ ಹಾಲರವಿ ಉತ್ಸವ ಮತ್ತು ತೆಪ್ಪೋತ್ಸವವನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಿಸಲಾಗುತ್ತದೆ ಎಂದು ತಿಳಿದು ಬಂದಿದೆ. : 3 ---2months -