ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತ ಪವನ್ ಹೆತ್ತೂರು ಅವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮಂಜೂರು… ಬೆಂಗಳೂರು,ನವೆಂಬರ್,10,2020(..):ಇತ್ತೀಚೆಗಷ್ಟೇ ಕೊರೋನಾಗೆ ತುತ್ತಾಗಿ ಮೃತಪಟ್ಟ ಪ್ರಜಾವಾಣಿ ಮೈಸೂರು ಬ್ಯೂರೊ ವರದಿಗಾರ ಪವನ್ ಹೆತ್ತೂರು ಅವರ ಕುಟುಂಬಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ 5 ಲಕ್ಷ ರೂ ಪರಿಹಾರವನ್ನು ಮಂಜೂರು ಮಾಡಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮೃತ ಪತ್ರಕರ್ತ ಪವನ್ ಹೆತ್ತೂರು (ವಿಜಯವಾಣಿ ಪತ್ರಿಕೆ ಮತ್ತು ಹಾಸನದ ಸ್ಥಳೀಯ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದರು) ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ. ಮನವಿಗೆ ಸ್ಪಂದಿಸಿ ಪರಿಹಾರ ಮಂಜೂರು ಮಾಡಿದ ಸಿಎಂ ಯಡಿಯೂರಪ್ಪ ಅವರಿಗೆ ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. : - – -- 5 - - -