ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಹಿನ್ನೆಲೆ: ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ… ಮೈಸೂರು,ನವೆಂಬರ್,10,2020(..):ರಾಜ್ಯದಲ್ಲಿ ಕುತೂಹಲ ಕೆರಳಿಸಿರುವ ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಈ ನಡುವೆ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಣೆ ಮಾಡಿದ್ದಾರೆ. ಶಿರಾ, ಆರ್.ಆರ್.ನಗರ ಹಾಗೂ ಬಿಹಾರ್ ನಲ್ಲಿ ಬಿಜೆಪಿ ಗೆಲುವು ಹಿನ್ನೆಲೆ, ನಗರದ ಬಿಜೆಪಿ ಕಚೇರಿ ಮುಂದೆ ಪರಸ್ಪರ ಸಿಹಿ ತಿನ್ನಿಸಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಕೇಂದ್ರಗೃಹ ಸಚಿವ ಅಮಿತ್ ಷಾ ಪರ ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ. : -- -- – - – .