ಆರ್.ಆರ್ ನಗರ ಉಪಚುನಾವಣೆ ಫಲಿತಾಂಶ: 8ನೇ ಸುತ್ತಿನ ಮತ ಎಣಿಕೆಯಲ್ಲೂ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಭರ್ಜರಿ ಮುನ್ನಡೆ… ಬೆಂಗಳೂರು,ನವೆಂಬರ್,10,2020(..): ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು 8 ನೇ ಸುತ್ತಿನ ಮತ ಎಣಿಕೆಯಲ್ಲೂ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. 8 ನೇ ಸುತ್ತಿನ ಮತ ಎಣಿಕೆ ಮುಕ್ತಾಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ 22577 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ/. ಮುನಿರತ್ನಗೆ 44,802 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಕುಸುಮಾಗೆ 22,131 ಮತಗಳು ಚಲಾವಣೆಯಾಗಿವೆ.ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವಿನತ್ತ ಹೆಜ್ಜೆ ಹಾಕುತ್ತಿದ್ದಾರೆ. : --- - -