ಕುರುಬರ ಎಸ್.ಟಿ ಹೋರಾಟ ಸಮಿತಿಯಿಂದ ರಾಜ್ಯ ಮಟ್ಟದ ಮಹಿಳೆಯರ ಚಿಂತನ ಸಭೆ : ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟನೆ ಬೆಂಗಳೂರು,ನವೆಂಬರ್,08,2020(..): ಹಾವೇರಿ ಜಿಲ್ಲೆಯ ಶ್ರೀ ಕ್ಷೇತ್ರ ಕಾಗಿನೆಲೆಯಲ್ಲಿ ಕುರುಬರ ಎಸ್.ಟಿ ಹೋರಾಟ ಸಮಿತಿ ಕರ್ನಾಟಕ ವತಿಯಿಂದ ನಡೆದ ರಾಜ್ಯ ಮಟ್ಟದ ಮಹಿಳೆಯರ ಚಿಂತನ ಸಭೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪರಪ್ಪ ಉದ್ಘಾಟಿಸಿದರು. ಮಾನ್ಯ ಕಾಗಿನೆಲೆ ಕನಕಗುರುಪೀಠದ ಜಗದ್ಗುರುಗಳಾದ ಶ್ರೀ ನಿರಂಜನಾನಂದಪುರಿ ಶ್ರೀಗಳು ಹಾಗೂ ಉಳಿದ ಶಾಖಾಮಠದ ಶ್ರೀಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಎಂ.ಟಿ.ನಾಗರಾಜ್ , ಮಾಜಿ ಸಚಿವ ಎಚ್.ಎಂ.ರೇವಣ್ಣ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಸೇರಿದಂತೆ ಮಹಿಳಾ ರಾಜ್ಯ ಸಮಿತಿ ಪದಾಧಿಕಾರಿಗಳು ಭಾಗವಹಿಸಿದ್ದರು. : --’---’- ---..-