ಬ್ರೇಕ್ ಫೇಲ್ ಆಗಿ ಪಲ್ಟಿಯಾದ ರಾಜಹಂಸ ಬಸ್: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ. ಬೆಳಗಾವಿ,ಏಪ್ರಿಲ್,16,2024 (..):ಬ್ರೇಕ್ ಫೇಲ್ ಆಗಿ ರಾಜಹಂಸ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ನಡೆದಿದೆ. ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್​ ತಿಮ್ಮಾಪುರ ಏಕಾಏಕಿ ಬ್ರೇಕ್ ಫೇಲ್​ ಆಗಿದ್ದು, ಈ ವೇಳೆ ರಸ್ತೆ ಪಕ್ಕದಲ್ಲಿದ್ದ ಬ್ಯಾರಿಕೇಡ್​​ಗೆ ಡಿಕ್ಕಿಯಾಗಿ ಬಳಿಕ ಪಲ್ಟಿಯಾಗಿದೆ. ಘಟನೆಯಲ್ಲಿ ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದರೆ, 20 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಎಲ್ಲಾ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಪಲ್ಟಿಯಾದ ಕೂಡಲೇ ಸ್ಥಳಕ್ಕೆ ಸ್ಥಳೀಯರು ಆಗಮಿಸಿ ಬಸ್​ ನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. : , , ,