ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ: ಶಿಕ್ಷಣ ಆಯೋಗ, ಅನುಷ್ಠಾನ ಮಿಷನ್ ಸ್ಥಾಪನೆ, ಕೆಎಸ್ ಯು ಕಾಯಿದೆಗೆ ಸಲಹೆ-ಡಿಸಿಎಂ ಅಶ್ವತ್ ನಾರಾಯಣ್ ಬೆಂಗಳೂರು,ನವೆಂಬರ್,7,2020(..): ರಾಜ್ಯದಲ್ಲಿ “ರಾಷ್ಟ್ರೀಯ ಶಿಕ್ಷಣ ನೀತಿ-2020” ಅನುಷ್ಠಾನಗೊಳಿಸುವ ಸಂಬಂಧ ರಚನೆಗೊಂಡಿರುವ ನಿವೃತ್ತ ಐಎಎಸ್ ಅಧಿಕಾರಿ ಎಸ್.ವಿ.ರಂಗನಾಥ್ ಅವರ ನೇತೃತ್ವದ ಕಾರ್ಯಪಡೆಯು ಕರ್ನಾಟಕ ಶಿಕ್ಷಣ ಆಯೋಗ (ಕೆಎಸ್ಎ/ಕೆಇಸಿ), ಅನುಷ್ಠಾನ ಮಿಷನ್, ಇನ್ನಿತರ ಹಲವು ಹೊಸ ಸಂಸ್ಥೆಗಳ ಸ್ಥಾಪನೆ ಸೇರಿದಂತೆ ಹಲವು ಸಲಹೆಗಳಿರುವ ಅಂತಿಮ ವರದಿಯನ್ನು ಶನಿವಾರ ಸರ್ಕಾರಕ್ಕೆ ಸಲ್ಲಿಸಿತು. ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಮತ್ತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ವಿಧಾನಸೌಧದಲ್ಲಿ ಅಂತಿಮ ವರದಿಯನ್ನು ಸಲ್ಲಿಸಲಾಯಿತು. ನಂತರ ಪತ್ರಿಕೋಷ್ಠಿ ಉದ್ದೇಶಿಸಿ ಮಾತನಾಡಿದ ಅಶ್ವತ್ಥ ನಾರಾಯಣ ಅವರು, ವಿವಿಧ ಇಲಾಖೆಗಳು, ಕಾರ್ಯಗಳು, ಸಂಸ್ಥೆಗಳು ಹಾಗೂ ಘಟಕಗಳ ನಡುವೆ ಸಮನ್ವಯತೆ ಸಾಧಿಸುವುದಕ್ಕಾಗಿ ಕರ್ನಾಟಕ ಶಿಕ್ಷಣ ಆಯೋಗ (ಕೆಎಸ್ಎ)/(ಕೆಇಸಿ) ವನ್ನು ಸ್ಥಾಪಿಸಬೇಕು; ಪ್ರಾಥಮಿಕ-ಪ್ರೌಢ ಹಾಗೂ ಉನ್ನತ ಶಿಕ್ಷಣ ಇವೆರಡೂ ಈ ಆಯೋಗದಡಿ ಕೆಲಸ ಮಾಡಬೇಕು; ಈ ಆಯೋಗಕ್ಕೆ ಮುಖ್ಯಮಂತ್ರಿ ಅವರು ಅಧ್ಯಕ್ಷರಾಗಿದ್ದುಕೊಂಡು ವರ್ಷಕ್ಕೆ ಕನಿಷ್ಠ ಎರಡು ಸಲ ಅಥವಾ ಅಗತ್ಯವಿದ್ದರೆ ಅದಕ್ಕಿಂತ ಹೆಚ್ಚು ಸಲ ಸಭೆಗಳನ್ನು ನಡೆಸಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಬೇಕು; ಉನ್ನತ ಶಿಕ್ಷಣ ಸಚಿವರು ಹಾಗೂ ಪ್ರಾಥಮಿಕ-ಪ್ರೌಢ ಶಿಕ್ಷಣ ಸಚಿವರು ಇದರ ಉಪಾಧ್ಯಕ್ಷರಾಗಿರಬೇಕು ಎಂಬುದು ಸೇರಿದಂತೆ ಹಲವು ಪ್ರಮುಖ ಕ್ರಮಗಳ ಬಗ್ಗೆ ಸಲಹೆಗಳನ್ನು ಈ ವರದಿ ಒಳಗೊಂಡಿದೆ ಎಂದು ತಿಳಿಸಿದರು.. 2021-22ನೇ ಶೈಕ್ಷಣಿಕ ವರ್ಷದಿಂದ ಇದನ್ನು ಹಂತ ಹಂತವಾಗಿ ಅಳವಡಿಸಲಾಗುತ್ತದೆ. ಅದಕ್ಕೆ ಮುನ್ನ ಎಲ್ಲಾ ಹಿತಾಸಕ್ತಿದಾರರೊಂದಿಗೆ ವರದಿ ಕುರಿತು ಸಮಾಲೋಚನೆ ನಡೆಸಲಾಗುತ್ತದೆ. ನೀತಿಯನ್ನು ಪೂರ್ತಿಯಾಗಿ ಅಳವಡಿಸಲು 15 ವರ್ಷಗಳ ಕಾಲಾವಕಾಶವಿದೆ. ಆದರೆ ಕರ್ನಾಟಕ ಸರ್ಕಾರವು 10 ವರ್ಷಗಳೊಳಗೇ ಇದರ ಅಳವಡಿಕೆ ಪ್ರಕ್ರಿಯೆಯನ್ನು ಮುಗಿಸುವ ಗುರಿ ಹೊಂದಿದೆ ಎಂದು ಅಶ್ವತ್ಥ ನಾರಾಯಣ ಹೇಳಿದರು. ಮಾರ್ಚ್ 4ರಂದು ರಚನೆಗೊಂಡಿದ್ದ ಈ ಪಡೆಯು ಮೂರು ಉಪ ಸಮಿತಿಗಳ ನೆರವಿನಿಂದ ಹಲವು ಸುತ್ತುಗಳಲ್ಲಿ ಸಮಾಲೋಚನೆ ನಡೆಸಿ ವರದಿಯನ್ನು ಅಂತಿಮಗೊಳಿಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ಕಾರ್ಯಪಡೆ ಸದಸ್ಯ ಎಂ.ಕೆ.ಶ್ರೀಧರ್ ಮತ್ತಿತರರು ಗೋಷ್ಠಿಯಲ್ಲಿದ್ದರು. ವರದಿಯಲ್ಲಿರುವ ಇತರ ಪ್ರಮುಖ ಸಲಹೆಗಳು ಈ ಕೆಳಕಂಡಂತಿವೆ: ಶಾಲಾ ಶಿಕ್ಷಣ ಹಂತಕ್ಕೆ ನಿರ್ದಿಷ್ಟ ಕ್ರಮಗಳು: ಉನ್ನತ ಶಿಕ್ಷಣ ಹಂತಕ್ಕೆ ನಿರ್ದಿಷ್ಟ ಕ್ರಮಗಳು : – - -