ನಿವೃತ್ತ ಪ್ರಾಧ್ಯಾಪಕ ಪ್ರೊ.ಅಶೋಕ್ ಕುಮಾರ್ ನೇಣಿಗೆ ಶರಣು ಬೆಂಗಳೂರು,ನವೆಂಬರ್,07,2020(..): ಬೆಂಗಳೂರು ವಿವಿಯ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಅಶೋಕ್ ಕುಮಾರ್ ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೈಕೋಲೇಔಟ್ ನ ಸಿಲ್ಕ್ ಬೋರ್ಡ್ ಮನೆಯಲ್ಲಿ ವಾಸವಿದ್ದ ಅವರು ಇಂದು ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಇವರಿಗೆ ಓರ್ವ ಪುತ್ರ ಇದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೈಕೋಲೇಔಟ್ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. : -- --