ಅಂಬೇಡ್ಕರ್ ಭವನ ಕಾಯಕಲ್ಪಕ್ಕೆ ಮುಂದಾದ ಶ್ರೀರಾಮುಲು: ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ… ಬೆಂಗಳೂರು, ನವೆಂಬರ್,7,2020(..):ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮೈಸೂರಿನ ಅಂಬೇಡ್ಕರ್ ಭವನ ಕಟ್ಟಡ ಕಾಮಗಾರಿ ಕೂಡಲೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಸೂಚನೆ ನೀಡಿದರು. ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಶಾಸಕರಾದ ತನ್ವೀರ್ ಸೇಠ್, ಜಿ. ಟಿ. ದೇವೇಗೌಡ ಭಾಗಿಯಾಗಿದ್ದರು. ಅಂಬೇಡ್ಕರ್ ಭವನ ಕಾಯಕಲ್ಪಕ್ಕೆ ಸಚಿವ ಶ್ರೀರಾಮುಲು ಮುಂದಾಗಿದ್ದು, ಈ ಸಂಬಂಧ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕೂಡಲೇ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನಗರದ ದಿವಾನ್ಸ್ ರಸ್ತೆಯಲ್ಲಿ ಅಂಬೇಡ್ಕರ್ ಭವನ ಭವ್ಯ ಕಟ್ಟಡ ಬರೋಬ್ಬರಿ 20 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಮುಕ್ತವಾಗುವಂತೆ ಅಧಿಕಾರಿಗಳಿಗೆ ಸಚಿವ ಶ್ರೀರಾಮುಲು ಸೂಚನೆ ನೀಡಿದರು. : - –- - - – -