ವಿವಿಧ ಕ್ಷೇತ್ರದ 64 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ.. ಬೆಂಗಳೂರು,7,2020(..):ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರದ 64 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನ ಪ್ರದಾನ ಮಾಡಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ಬಳಿಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 64 ಸಾಧಕರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡಿದರು. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮುಖ್ಯಮಂತ್ರಿಗಳು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ವೇಳೆ ಡಿಸಿಎಂಳಾದ ಗೋವಿಂದ ಕಾರಜೋಳ, ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಮುಂತಾದವರು ಉಪಸ್ಥಿತರಿದ್ದರು. : – 64 --