ಪರೀಕ್ಷೆ ಬರೆದ ಕೊರೋನಾ ಪಾಸಿಟಿವ್ ವಿದ್ಯಾರ್ಥಿನಿ… ಮೈಸೂರು,ನವೆಂಬರ್,7,2020(..):ಮೈಸೂರು ವಿಶ್ವ ವಿದ್ಯಾನಿಲಯದ ಸ್ನಾತಕೋತ್ತರ ಪ್ರವೇಶಾತಿಗೆ ಪರೀಕ್ಷೆ ನಡೆಯುತ್ತಿದ್ದು, ಈ ಮಧ್ಯೆ ಕೊರೋನಾ ಪಾಸಿಟಿವ್ ವಿದ್ಯಾರ್ಥಿನಿ ಪಿಪಿಇ ಕಿಟ್ ಧರಿಸಿ ಪರೀಕ್ಷೆ ಬರೆದಿದ್ದಾರೆ. ಮೈಸೂರು ವಿವಿಯಲ್ಲಿ ಸ್ನಾತಕೋತ್ತರ ಪ್ರವೇಶಾತಿಗೆ ಪರೀಕ್ಷೆಗಳು ನಡೆಯುತ್ತಿದ್ದು, ಜೀವ ವಿಜ್ಞಾನ ವಿಷಯದ ಕುರಿತಾಗಿ ಕೊರೋನಾ ಪಾಸಿಟಿವ್ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಾರೆ. ಮಾನಸಗಂಗೋತ್ರಿಯ ಸಂಸ್ಕೃತ ಅಧ್ಯಯನ ವಿಭಾಗದಲ್ಲಿ ಸಿಇಟಿ ಪರೀಕ್ಷೆ ನಡೆಯುತ್ತಿದ್ದು, ಕೋವಿಡ್ -19 ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿ ಪ್ರತ್ಯೇಕ ಮೇಲ್ವಿಚಾರಕರನ್ನು ನಿಯೋಜಿಸಲಾಗಿತ್ತು. ಈ ಮೂಲಕ ಮೈಸೂರು ವಿವಿ ಆಡಳಿತ ಮಂಡಳಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಕೊರೋನಾ ಪಾಸಿಟಿವ್ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿತು. : - –- –