ನನ್ನ ಗೆಲುವು ನಿಶ್ಚಿತ: ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ‘ಕೈ’ ಅಭ್ಯರ್ಥಿ ಕುಸುಮಾ… ಮೈಸೂರು,ನವೆಂಬರ್,6,2020(..):ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರ ಉಪಚುನಾವಣೆಯ ಮತದಾನ ಮುಗಿದಿದ್ದು ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ. ಈ ಮಧ್ಯೆ ಫಲಿತಾಂಶಕ್ಕೂ ಮುನ್ನ ಆರ್.ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ತಾಯಿ ಚಾಮುಂಡೇಶ್ವರಿ ಸನ್ನಿಧಿಗೆ ಆಗಮಿಸಿ ದರ್ಶನ ಪಡೆದಿದ್ದಾರೆ. ತಂದೆ ಹನುಮಂತಪ್ಪ ಜೊತೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು, ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಶಿರಬಾಗಿ ತಾಯಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಕುಸುಮಾ ಅವರಿಗೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದರು. ತಾಯಿ ಚಾಮುಂಡೇಶ್ವರಿ ದರ್ಶನದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಕುಸುಮಾ, ನನಗೆ ಗೆಲ್ಲುವ ಆತ್ಮವಿಶ್ವಾಸ‌ ಇದೆ. ಶೇಕಡವಾರು ಕಡಿಮೆ ಆಯ್ತೆಂಬ ಕಾರಣಕ್ಕೆ ಈ ವಿಶ್ವಾಸ ವ್ಯಕ್ತಪಡಿಸುತ್ತಿಲ್ಲ. ಜನರು ನನಗೆ ತೋರಿಸಿದ ಪ್ರೀತಿಯಿಂದ ಈ ವಿಶ್ವಾಸ ಮೂಡಿದೆ. ನಿಷ್ಪಕ್ಷಪಾತ ಚುನಾವಣೆ ನಡೆದಿದೆ. ನಾವು ಇದನ್ನೆ ಬಯಸಿದ್ದೆವು. ಎಲ್ಲಾ ಪಕ್ಷದ ಮತದಾರರು ನನಗೆ ಬೆಂಬಲ ನೀಡಿದ್ದಾರೆ. ನನ್ನ ಗೆಲುವು ನಿಶ್ಚಿತ. ಚುನಾವಣೆ ಫಲಿತಾಂಶದ ಬಳಿಕ ಉಳಿದ ಎಲ್ಲ ಮಾಹಿತಿಯನ್ನ ಜನರಿಗೆ ಹೇಳುತ್ತೇನೆ ಎಂದು ಹೇಳಿದರು. : - - –- -