ದೇಶದಲ್ಲಿ ಒಂದೇ ದಿನ 47,638 ಮಂದಿಗೆ ಕೊರೋನಾ ಸೋಂಕು ಪತ್ತೆ… ನವದೆಹಲಿ,ನವೆಂಬರ್,6,2020(..):ದೇಶದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದ್ದು, ಈ ನಡುವೆ ಕಳೆದ 24 ಗಂಟೆಯಲ್ಲಿ 47,638 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿ ಒಂದೇ ದಿನ ಹೊಸದಾಗಿ 47,638 ಕೋವಿಡ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 84,11,724ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 670 ಜನರು ಕೊರೋನಾ ಸೋಂಕಿಗೆ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,24,985ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 5,20,773 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 77,65,966 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. : 47,638 - – -